ತುಂಬೆಯ ಕಾವ್ಯ ಕೆ ನಾಯಕ್‌ಗೆ ಪಿಎಚ್‌ಡಿ ಪದವಿ

Upayuktha
0


ಬಂಟ್ವಾಳ: ತುಂಬೆಯ ಕಾವ್ಯ ಕೆ ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್ ಗ್ಲುಕೋಸ್ ಮಾನಿಟರಿಂಗ್ ಸೆನ್ಸರ್ಸ್ ಫಾರ್ ಎಫೆಕ್ಟಿವ್ ಮ್ಯಾನೇಜ್ಮೆಂಟ್ ಆಫ್ ಡಯಾಬಿಟಿಸ್” ಎಂಬ ವಿಷದ ಕುರಿತಾಗಿ ಮಂಡಿಸಿದ ಮಹಾಪ್ರಬಂಧಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (IISc), ಬೆಂಗಳೂರು  ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. 


ಈ ಮಹತ್ವದ ಸಂಶೋಧನೆ ಡಯಾಬಿಟಿಸ್ ನಿಖರ ನಿರ್ವಹಣೆಗೆ ಸಹಾಯ ಮಾಡುವ ಎಲೆಕ್ಟ್ರೋಕೆಮಿಕಲ್ ತಂತ್ರಜ್ಞಾನಾಧಾರಿತ ನಿರಂತರ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ ಅಭಿವೃದ್ಧಿಯ ಬಗ್ಗೆ ಆಳವಾದ ಅಧ್ಯಯನವನ್ನು ಒಳಗೊಂಡಿದೆ.


ಇವರು ತುಂಬೆಯ ರೂಪ ಮತ್ತು ಕೆ. ಕೃಷ್ಣ ನಾಯಕ್ ದಂಪತಿಯ ಪುತ್ರಿಯಾಗಿದ್ದು, ಮಂದರ್ಕೆಯ ಗಿರೀಶ್ ಎನ್. ಪೈ ಅವರ ಧರ್ಮಪತ್ನಿ, ಬೆಂಗಳೂರು ನಗರದ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top