ಬಾಗಲಕೋಟೆ: ಭಾರತೀಯ ಜೀವ ವಿಮಾ ನಿಗಮ (LIC) ಆಯೋಜಿಸಿದ್ದ ವಲಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿ ವಿಭಾಗವನ್ನು ಪ್ರತಿನಿಧಿಸಿದ್ದ ಬಾಗಲಕೋಟೆ ಶಾಖೆಯ ಉದ್ಯೋಗಿ ಆರ್. ಕೃಷ್ಣಾರೆಡ್ಡಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಆಂಧ್ರಪ್ರದೇಶದ ರಾಜಮುಂಡ್ರಿಯಲ್ಲಿ ನಡೆದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳನ್ನು ಒಳಗೊಂಡ ಈ ವಲಯ ಮಟ್ಟದ ಸ್ಪರ್ಧೆಯಲ್ಲಿ ಕೃಷ್ಣಾರೆಡ್ಡಿ ಅವರು ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಅವರು ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು LIC ಬಾಗಲಕೋಟೆ ಶಾಖೆಯ ವ್ಯವಸ್ಥಾಪಕ ಎಂ.ಡಿ. ರಕ್ಷಿತ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ