ಮಂಗಳೂರು, ಜು.12: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಶನಿವಾರದಂದು ಗುರುವಂದನಾ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವನ್ನು ವಿಶ್ರಾಂತ ಹೆಚ್ಚುವರಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆ ಹಾಗೂ ಬೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಆಡಳಿತ ಅಧಿಕಾರಿಗಳಾದ ಪ್ರೊ. ರಾಜಶೇಖರ್ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿ, ಸರ್ವ ಕಾಲಕ್ಕೂ ಎಲ್ಲೆಲ್ಲಿಯೂ ಗೌರವಿಸಲ್ಪಡುವ ಹುದ್ದೆ ಎಂದರೆ ಅದು ಶಿಕ್ಷಕ ಹುದ್ದೆ ಎಂದರು.
ಪೂರ್ವ ದಕ್ಷಿಣ ಮಧ್ಯ ಕ್ಷೇತ್ರೀಯ ಪ್ರಮುಖ್ ಶ್ರೀ ಬಾಲಕೃಷ್ಣ ಭಟ್ ಉಪನ್ಯಾಸ ನೀಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಗುರುವಿಗೆ ಮಹತ್ತರ ಸ್ಥಾನವಿದೆ. ಅಂತಹ ಗುರು ಪರಂಪರೆ ಸದಾ ಒಳಿತನ್ನು ಬಯಸುತ್ತಿರುತ್ತದೆ. ಮಕ್ಕಳ ಯಶಸ್ಸನ್ನು ನೋಡಿ ಮಾತ್ಸರ್ಯ ಪಡದವರು ಜಗತ್ತಿನಲ್ಲಿ ಇದ್ದರೆ ಅದು ಹೆತ್ತವರು ಮತ್ತು ಗುರುಗಳು ಮಾತ್ರ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರವೀಣ್ ಕುಮಾರ್ ಗುರುವಿನ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆ ಆರ್ ಎಂ ಎಸ್ ಎಸ್ ಮಂಗಳೂರು ವಿಭಾಗದ ಅಧ್ಯಕ್ಷರಾದ ವಾಣಿ ಯು ಸ್ವಾಗತಿಸಿದರು. ಕೆ ಆರ್ ಎಂ ಎಸ್ ಎಸ್ ರಾಜ್ಯ ಜಂಟಿ ಪ್ರದಾನ ಕಾರ್ಯದರ್ಶಿ ಡಾ. ಮಾಧವ ಎಂ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಜಲ್ ವಂದಿಸಿದರು. ಸಂಧ್ಯಾ ಆಳ್ವಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ