ಮಂಗಳೂರು: ಸೇಂಟ್ ಅಗ್ನೆಸ್ ಕಾಲೇಜಿನ ಸೆಂಟಿನರಿ ಬ್ಲಾಕ್’ನಲ್ಲಿ, CASK ಸೆಂಟಿನರಿ ಟ್ರಸ್ಟ್ ವತಿಯಿಂದ ಇತ್ತೀಚೆಗೆ, 307 ಮಂದಿ ಅರ್ಹ ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿಗಳಿಗೂ ಹೆಚ್ಚು ಮೊತ್ತದ ಸ್ಕಾಲರ್’ಶಿಪ್ ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅಧ್ಯಕ್ಷರಾಗಿದ್ದರು. NRI ದಾನಿ ಮೈಕಲ್ ಡಿಸೋಜಾ ಮತ್ತು ಸೇಂಟ್ ಅಗ್ನೆಸ್ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ವೆನಿಸ್ಸಾ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಸ್ಕಾಲರ್’ಶಿಪ್ ಪಡೆದ ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು CASK ಸೆಂಟಿನರಿ ಟ್ರಸ್ಟಿನ ದಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
2014ರಿಂದಲೂ, ಕಾಸ್ಕ್ ಸೆಂಟಿನರಿ ಟ್ರಸ್ಟ್ ಸಹಾನುಭೂತಿಯೊಂದಿಗೆ ಎಲ್ಲರಿಗೂ ಸಹಾಯ ಮಾಡುತ್ತಿದೆ. ವಿಶೇಷವಾಗಿ ಶಿಕ್ಷಣ, ಆರೋಗ್ಯ, ವಾಸ್ತವ್ಯ, ಸಲಹೆ ಮತ್ತು ಪರಿಸರ ಸಂರಕ್ಷಣೆಯ ಮೂಲಕ ಸಂಕಷ್ಟದಲ್ಲಿರುವ ಮತ್ತು ಸಮಾಜದ ಅಂಚಿನಲ್ಲಿರುವವರಿಗೆ, ಈ ಟ್ರಸ್ಟ್ ಭರವಸೆಯ ದೀಪ ಮತ್ತು ಸಕಾರಾತ್ಮಕ ಬದಲಾವಣೆಯ ಪ್ರೇರಕವಾಗಿ, ಸಮುದಾಯಗಳನ್ನು ಬಲಪಡಿಸಲು ಮತ್ತು ಜನರ ಜೀವನವನ್ನು ಉನ್ನತಗೊಳಿಸುವ ಕಾರ್ಯಗಳನ್ನು ನಡೆಸುತ್ತಲೇ ಬಂದಿದೆ.
CASK ಸೆಂಟಿನರಿ ಟ್ರಸ್ಟ್ ಅದರ ಸಂಸ್ಕೃತ ಧ್ಯೇಯವಾಕ್ಯ “ಜೀವಿತಂ ಪ್ರೇಮಯ” (LIFE FOR LOVE) ಅನ್ನು ಅನುಸರಿಸುತ್ತದೆ. CCT ಸ್ಕಾಲರ್’ಶಿಪ್ ಕಾರ್ಯಕ್ರಮವು ಬಡ ವಿದ್ಯಾರ್ಥಿಗಳಿಗೆ ಪ್ರೀತಿಯ ಕಾರ್ಯವಾಗಿದೆ. ಇದು ಧರ್ಮ, ಭಾಷೆ, ಅಂಕಗಳು ಅಥವಾ ಯೋಗ್ಯತೆಯನ್ನು ಪರಿಗಣಿಸದೆ, ಅರ್ಜಿದಾರರ ಆರ್ಥಿಕ ಸ್ಥಿತಿಯನ್ನು ಮಾತ್ರ ಗಮನದಲ್ಲಿಡುತ್ತದೆ. ಪ್ರಯೋಜನವನ್ನು ಪಡೆದವರಲ್ಲಿ ದಿನಗೂಲಿಗಳು, ರಿಕ್ಷಾ ಚಾಲಕರು ಮತ್ತು ಬೀದಿ ಅಂಗಡಿಗಾರರ ಮಕ್ಕಳು ಸೇರಿದ್ದಾರೆ. ಅನೇಕ ಮಕ್ಕಳು, ತಂದೆ ಅಥವಾ ತಾಯಿಯನ್ನು ಕಳೆದುಕೊಂಡಿದ್ದರೆ, ಅನೇಕ ಪೋಷಕರು ನಿರುದ್ಯೋಗಿಗಳೂ ಆಗಿದ್ದಾರೆ.
CCT ಸ್ಕಾಲರ್’ಶಿಪ್ ಕಾರ್ಯಕ್ರಮವು ಪ್ರಯೋಜನ ಪಡೆದವರನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ಅವರು ಶ್ರಮಿಸಿ ಉತ್ತಮ ಶಿಕ್ಷಣವನ್ನು ಪಡೆದು, ಒಂದು ದಿನ ತಮ್ಮ ಕುಟುಂಬ, ಸಮುದಾಯ ಮತ್ತು ರಾಷ್ಟ್ರದ ಸೇವೆಯನ್ನು ಹೆಮ್ಮೆಯಿಂದ ನೀಡುವಂತೆ ಮಾಡುತ್ತದೆ.
307 ಪ್ರಯೋಜನಾರ್ಥಿಗಳಲ್ಲಿ 162 ಹುಡುಗಿಯರು ಹಾಗೂ ಸುಮಾರು 40% ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಈ ವಿದ್ಯಾರ್ಥಿಗಳು 70ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿಗೆ ಸೇರಿದವರಾಗಿದ್ದು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಜೊತೆಗೆ ನರ್ಸಿಂಗ್, ಇಂಜಿನಿಯರಿಂಗ್ ಮತ್ತು ಪ್ಯಾರಾ-ಮೆಡಿಕಲ್ ಕೋರ್ಸ್‌ಗಳ ವಿದ್ಯಾರ್ಥಿಗಳೂ ಸೇರಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ