ಎಡನೀರು: ಯಕ್ಷಗಾನ ಹಿರಿಯ ಕಲಾವಿದ ಕುಂಬಳೆ ಶ್ರೀಧರ ರಾವ್ ವಿಧಿವಶರಾಗಿ ಒಂದು ವರುಷ. ಅವರ ಸ್ಮೃತಿ ಕಾರ್ಯಕ್ರಮವು ಕಾಸರಗೋಡು ಜಿಲ್ಲೆಯ ಶ್ರೀ ಎಡನೀರು ಮಠದಲ್ಲಿ ಪೂಜ್ಯ ಶ್ರೀಗಳ ಚಾತುರ್ಮಾಸ ವ್ರತಾಚರಣೆಯ ಸಂದರ್ಭದಲ್ಲಿ, 2025 ಜುಲೈ 13 ಭಾನುವಾರ ಅಪರಾಹ್ನ ಗಂಟೆ 2-00ಕ್ಕೆ ಜರುಗಲಿರುವುದು.
ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ 'ಶ್ರೀಧರ ಸ್ಮರಣಾಂಜಲಿ' ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯರು ಶ್ರೀಧರ ಸ್ಮೃತಿಯನ್ನು ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಕಲಾವಿದ ಕೆ.ಎಚ್. ದಾಸಪ್ಪ ರೈವರನ್ನು ಗೌರವಿಸಲಾಗುವುದು.
ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಹಾಗೂ ಬಳಿಕ ಶ್ರೀ ಧರ್ಮಸ್ಥಳ ಮೇಳದ ಕುಂಬಳೆಯವರ ಒಡನಾಡಿ ಕಲಾವಿದರಿಂದ 'ಚಕ್ರವ್ಯೂಹ - ದಮಯಂತಿ ಪುನರ್ ಸ್ವಯಂವರ' ಪ್ರಸಂಗಗಳ ಪ್ರದರ್ಶನ ಜರುಗಲಿದೆ. ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯೋಜನೆಯಲ್ಲಿ ಪ್ರದರ್ಶನ ಸಂಪನ್ನವಾಗಲಿದೆ.
ಕಳೆದ 2024 ದಶಂಬರ 29ರಂದು ಕುಂಬಳೆಯ ಶ್ರೀ ಕಣಿಪುರ ಕ್ಷೇತ್ರದಲ್ಲಿ ಕುಂಬಳೆ ಶ್ರೀಧರರ ನೆನಪು ಸಂಚಿಕೆ 'ಕಲಾ ಶ್ರೀಧರ' ಬಿಡುಗಡೆಗೊಂಡಿರುವುದು ಇಲ್ಲಿ ಉಲ್ಲೇಖನೀಯ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ