ಮಂಗಳೂರು: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.
ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾಧರಿಯಾಗಬೇಕೆಂದು ಹೇಳಿದರು.
ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ‍್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, ಉಪಾಧ್ಯಕ್ಷರು, ಪ್ಯಾರಿಷ್ ಪಾಸ್ಟೋರಲ್ ಕೌನ್ಸಿಲ್ ಮಿಲಾಗ್ರಿಸ್ ಚರ್ಚ್ ಉಪಸ್ಥಿತರಿದ್ದರು.
ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಶ್ರೀ ಮೆಲ್ವಿನ್ ವಾಸ್‌ವರು ನೂತನ ವಿದ್ಯಾರ್ಥಿ ಸಂಘದ ನಾಯಕರಿಗೆೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಶ್ರೀಮತಿ ಜ್ಯೋತಿ ರತ್ನ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಪುಲ್ ಶೆಟ್ಟಿ ವಂದಿಸಿದರು. ಶ್ರೀಮತಿ ಶೆರೆಲ್ ಡಿಸೋಜ ನಿರೂಪಿಸಿದರು. ಈ ಕಾರ್ಯಕ್ರಮ ಕಾಲೇಜು ಗೀತೆಯೊಂದಿಗೆ ಮುಕ್ತಾಯಗೊಂಡಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ