ನಡ: ವಿದ್ಯಾರ್ಥಿ ಸಂಘದ ಉದ್ಘಾಟನೆ

Upayuktha
0




ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜು ನಡ ಇಲ್ಲಿನ 2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಬುಧವಾರ (ಜು. 9) ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು.


ಉಜಿರೆಯ ಖ್ಯಾತ ದಂತ ವೈದ್ಯರಾದ ಡಾ. ಎಂ.ಎಂ ದಯಾಕರ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಜಗತ್ತಿನಲ್ಲಿ ಅತಿ ದೊಡ್ಡ ಶಕ್ತಿ ಎಂದರೆ ಯುವಶಕ್ತಿ. ಈ ಯುವಶಕ್ತಿಯನ್ನು ನಾವು ಸರಿಯಾಗಿ ಬಳಸಿಕೊಂಡರೆ ನಮಗೆ ಗೆಲುವು ಸಾಧ್ಯ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಕ್ಕಳಿಗೆ ತಿಳಿ ಹೇಳಿದರು.


ಈ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ, ಪ್ರಭಾಕರ ಮಯ್ಯ, ಕೊಯ್ಯೂರು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಮೋಹನ ಗೌಡ ಉಪಸ್ಥಿತರಿದ್ದು, ಮಕ್ಕಳಿಗೆ ಹಿತನುಡಿಗಳನ್ನಾಡಿದರು. ಪ್ರಾಂಶುಪಾಲರಾದ ಚಂದ್ರಶೇಖರ್ ಇವರು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಹೂ ಕೊಟ್ಟು ಗೌರವಿಸಿದರು.


ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ ದೇವಾಡಿಗ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ ಇವರು ಎಲ್ಲರನ್ನೂ ಹಾರ್ದಿಕವಾಗಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಸವಿತಾ ಧನ್ಯವಾದಗೈದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿವಿ ಇವರು ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top