ಸುರತ್ಕಲ್‌ ರೋಟರ್‍ಯಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

Upayuktha
0


ಸುರತ್ಕಲ್: ಉತ್ತಮ ಮಾನವೀಯ ಮೌಲ್ಯಗಳನ್ನು ಅರಿತು ಉತ್ತಮ ವಿದ್ಯಾರ್ಥಿಗಳು ಇಂಟರ್‍ಯಾಕ್ಟ್ ಕ್ಲಬ್ ಪ್ರೇರಕ ಎಂದು ಸುರತ್ಕಲ್ ರೋಟರಿ ಕ್ಲಬ್‌ನ ಅಧ್ಯಕ್ಷ ರೊ. ರಾಮಚಂದ್ರ ಬಿ. ಕುಂದರ್ ನುಡಿದರು. ಅವರು ಸುರತ್ಕಲ್ ರೋಟರಿ ಕ್ಲಬ್ ಪ್ರವರ್ತಿತ ಎನ್.ಐ.ಟಿ.ಕೆ ಕನ್ನಡ ಮಾಧ್ಯಮ ಪ್ರೌಢ ಶಾಲೆ ಶ್ರೀನಿವಾಸ ನಗರ, ಸುರತ್ಕಲ್‌ನ ರೋಟರ್‍ಯಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು.


ಮುಖ್ಯ ಅತಿಥಿ ಶ್ರೀನಿವಾಸ್ ದೇವರಾವ್ ಮಾತನಾಡಿ, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕೆಂದರು.


ನೂತನ ಅಧ್ಯಕ್ಷ ಮಹಾಂತೇಶ್ ಮಾತನಾಡಿ, ನೂತನ ಕಾರ್ಯಕ್ರಮಗಳ ಮೂಲಕ ಸ್ವವಿಕಸನಕ್ಕೆ ಪ್ರಯತ್ನ ಮಾಡುತ್ತೇವೆ ಎಂದರು.


ಶಾಲಾ ಮುಖ್ಯ ಶಿಕ್ಷಕಿ ರಶ್ಮಿ ಮತ್ತು ಸುರತ್ಕಲ್ ರೋಟರಿ ಕ್ಲಬ್ ಕಾರ್ಯದರ್ಶಿ ರಾಮಮೋಹನ್ ವೈ. ಶುಭ ಹಾರೈಸಿದರು. ಹಿರಿಯ ರೋಟರಿ ಸದಸ್ಯ ಸಚ್ಚಿದಾನಂದ ಕ್ಲಬ್ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.


ರೋಟರಿ ಕ್ಲಬ್ ನಿರ್ದೇಶಕರಾದ ಶ್ರೀನಿವಾಸ ರಾವ್ ಪಾದೆಬೆಟ್ಟು, ಕೃಷ್ಣಮೂರ್ತಿ, ಯಶೋಮತಿ ರವೀಂದ್ರನಾಥ್, ಕ್ಲಬ್ ಶಾಲಾ ಶಿಕ್ಷಕಿ ಸಂಯೋಜಕಿ ವಿದ್ಯಾ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top