ನಿಟ್ಟೆಯಲ್ಲಿ ಪ್ರಥಮ ವರ್ಷದ ಬಿಟೆಕ್ ವಿದ್ಯಾರ್ಥಿಗಳ ಎರಡನೇ ತಂಡದ ಇಂಡಕ್ಷನ್ ಕಾರ್ಯಕ್ರಮ

Chandrashekhara Kulamarva
0



ನಿಟ್ಟೆ: ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್ ನ ವಿದ್ಯಾಸಂಸ್ಥೆಗಳಲ್ಲೊಂದಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಕೋರ್ಸ್ ಗಳಿಗೆ 2025 ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ನೂತನ ಬ್ಯಾಚ್ ನ ಎರಡನೇ ವಿದ್ಯಾರ್ಥಿಸಮೂಹದ ಉದ್ಘಾಟನಾ ಕಾರ್ಯಕ್ರಮವು ಜು.21 ರಂದು ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ಜರುಗಿತು.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅವರು ವಿದ್ಯಾರ್ಥಿಗಳನ್ನು ಹಾಗೂ ಪೋ‍ಷಕರನ್ನು ಉದ್ದೇಶಿಸಿ ಮಾತನಾಡಿದರು. 'ವಿದ್ಯಾರ್ಥಿಗಳು ಓದಿಗೆ ಪ್ರಥಮ ಪ್ರಾಶಸ್ತ್ಯವನ್ನು ನೀಡುವುದು ಅತ್ಯಗತ್ಯ. ಕೌಶಲ್ಯತೆಯನ್ನು ಬೆಳೆಸಿಕೊಂಡು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಷ್ಟೇ ಸಂಸ್ಥೆಗಳು ಉದ್ಯೋಗಿಯನ್ನಾಗಿ ಸೇರಿಸಿಕೊಳ್ಳಲು ಇಷ್ಟಪಡುತ್ತಾರೆ. ನಿಟ್ಟೆ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಈ ದೃಷ್ಠಿಯಲ್ಲಿ ಸಜ್ಜುಗೊಳಿಸಲು ಸದಾಸನ್ನದ್ದವಾಗಿರುತ್ತದೆ. ತಾಂತ್ರಿಕ ಶಿಕ್ಷಣದೊಂದಿಗೆ ದೈಹಿಕ ಆರೋಗ್ಯ ಹಾಗೂ ಮಾನಸಿಕ ನೆಮ್ಮದಿ ವೃದ್ದಿಯ ಹಿನ್ನಲೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಷಯಗಳಿಗೂ ಸಮಾನ ಮಹತ್ವವನ್ನು ಕೊಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯ' ಎಂದು ಅವರು ಹೇಳಿದರು.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ವೈಸ್-ಚಾನ್ಸಲರ್ ಡಾ.ಎಂ.ಎಸ್.ಮೂಡಿತ್ತಾಯ ಸಭೆಯನ್ನುದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೇಗೆ ಸಿದ್ದರಾಗಬೇಕು ಹಾಗೂ ಸವಾಲುಗಳನ್ನು ಎದುರಿಸುವ ಶಕ್ತಿ ಹಾಗೂ ಯುಕ್ತಿಯನ್ನು ಹೇಗೆ ಮೈಗೂಡಿಸಿಕೊಳ್ಳಬೇಕು ಎಂದು ವಿವರಿಸಿದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಪ್ರೋ.ಡಾ. ಗೋಪಾಲ್ ಮುಗೇರಾಯ ಅವರು ಮಾತನಾಡಿ ನಿಟ್ಟೆ ವಿದ್ಯಾಸಂಸ್ಥೆಯ ಇತಿಹಾಸ, ಬೆಳೆದುಬಂದ ಹಾದಿಯ ಬಗೆಗೆ ನೂತನ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿವರಿಸಿದರು.


ಈ ಕಾರ್ಯಕ್ರಮದ ಸಂದರ್ಭದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಹೊತ್ತಗೆಯಾದ ನಿದರ್ಶನ 2025 ನ್ನು ಬಿಡುಗಡೆಗೊಳಿಸಲಾಯಿತು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿದರು. ಪ್ರಥಮ ವರ್ಷ ಬಿಟೆಕ್ ವಿದ್ಯಾರ್ಥಿಗಳ ಸಂಯೋಜಕ ಹಾಗೂ ಸ್ಟೂಡೆಂಟ್ ಇಂಡಕ್ಷನ್ ಕಾರ್ಯಕ್ರಮದ ಸಂಯೋಜಕ ಡಾ. ಜಾಯ್ ಮಾರ್ಟಿಸ್ ವಂದಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಹರ್ಷಿತಾ ಎಂ ಜತ್ತನ್ನಾ ಕಾರ್ಯಕ್ರಮ ನಿರೂಪಿಸಿದರು.


ಸಭಾ ಕಾರ್ಯಕ್ರಮದ ಅನಂತರ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅವರು ನಿಟ್ಟೆ ಸಮೂಹ ಸಂಸ್ಥೆಯ ಹಾಗೂ ಅದು ಬೆಳೆದು ಬಂದ ಹಾದಿಯ ಬಗೆಗೆ ಮಾತನಾಡಿದರು. ಮಧ್ಯಾಹ್ನ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಲೆ.ಕರ್ನಲ್ ಗ್ರೇಶಿಯನ್ ಸಿಕ್ವೆರಾ 'ಸ್ಟೂಡೆಂಟ್ ಲೈಫ್ & ರಿಲೇಶನ್ ಶಿಪ್ ಆಫ್ ಪೇರೆಂಟ್ಸ್ ವಿದ್ ಟೀನೇಜರ್ಸ್' ಎಂಬ ವಿಷಯದ ಬಗೆಗೆ ಮಾತನಾಡಿದರು.




إرسال تعليق

0 تعليقات
إرسال تعليق (0)
To Top