ಮ೦ಗಳೂರು: ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಪ್ರಯುಕ್ತ ಮೆಸ್ಕಾಂ ವ್ಯಾಪ್ತಿಯ ನಗರ ಪ್ರದೇಶದಲ್ಲಿ ಜು.25ರ ರಾತ್ರಿ 8.30 ಗಂಟೆಯಿಂದ ಜು.27ರ ರಾತ್ರಿ 10 ಗಂಟೆಯವರೆಗೆ ಆನ್ ಲೈನ್ ಸೇವೆ ಲಭ್ಯವಿರುವುದಿಲ್ಲ.
ಜು.25ರ ರಾತ್ರಿ 8.30 ಗಂಟೆಯಿಂದ ಜು. 27 ರ ರಾತ್ರಿ 10 ಗಂಟೆಯವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯವನ್ನು ಕೈಗೊಳ್ಳಲಾಗಿದೆ. ಹಾಗಾಗಿ ಈ ಅವಧಿಯಲ್ಲಿ ಮೆಸ್ಕಾಂ ಆನ್ಲೈನ್ ಸೇವೆಗಳಾದ ವಿದ್ಯುತ್ ಬಿಲ್ಲುಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಇತ್ಯಾದಿ ಆನ್‌ಲೈನ್ ಆಧಾರಿತ ಸೇವೆಗಳು ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ಆರ್ ಎಪಿಡಿಆರ್ ಪಿ ನಗರ ಪ್ರದೇಶಗಳ ಗ್ರಾಹಕರಿಗೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿನ ಅಡಚಣೆಗಾಗಿ ವಿಷಾದಿಸಲಾಗಿದೆ ಹಾಗೂ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ