ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ

Chandrashekhara Kulamarva
0



ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯದ ಸಿ.ಬಿ.ಎಸ್.ಇ  ವಿದ್ಯಾರ್ಥಿಗಳು ಅಲಂಕಾರಿನ ಶ್ರೀಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.


ಕಿಶೋರ ವರ್ಗದ ಬಾಲಕಿಯರ 52 ಕೆ ಜಿ ವಿಭಾಗದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ದೃಶಾನ ಎಸ್ ಸರಳಿಕಾನ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಲ ವರ್ಗದ ಬಾಲಕಿಯರ 42 ಕೆಜಿ ವಿಭಾಗದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಯಶ್ವಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಂತೆಯೇ ಬಾಲವರ್ಗದ ಬಾಲಕರ 35 ಕೆಜಿ ವಿಭಾಗದಲ್ಲಿ ಆರನೇ ತರಗತಿಯ ವಿದ್ಯಾರ್ಥಿ ಯುಗನ್ ಹಿಮಾನಿಶ್ ತೃತೀಯ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ದೃಶಾನ ಎಸ್ ಸರಳಿಕಾನ ಇವರು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.



إرسال تعليق

0 تعليقات
إرسال تعليق (0)
To Top