ಜುಲೈ 3; ಅಂಬಿಕಾದಲ್ಲಿ ನೀಟ್ ರಿಪೀಟರ್ಸ್‌ ತರಗತಿ ಉದ್ಘಾಟನೆ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯದ ವತಿಯಿಂದ 2025 - 2026 ನೇ ಸಾಲಿನ ನೀಟ್ ರಿಪೀರ‍್ಸ್ ಬ್ಯಾಚ್‌ನ ತರಗತಿಗಳು ಜುಲೈ 3ರಿಂದ ಪ್ರಾರಂಭಗೊಳ್ಳಲಿವೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ನೀಟ್ ರಿಪೀಟರ್ಸ್‌ ತರಗತಿಗಳನ್ನು ಬೆಳಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ. 


ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಸ್ಪರ್ಧಾತ್ಮಕ ಪರೀಕ್ಷೆಗಳ ಸಂಯೋಜಕ ಕಿಶೋರ್ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನೀಟ್ ರಿಪೀಟರ್ಸ್‌ ತರಗತಿಗಳಿಗೆ ದಾಖಲಾತಿ ಹೊಂದುವುದಕ್ಕೆ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸಕ್ತರು ತಕ್ಷಣ ಸೇರಿಕೊಳ್ಳಬಹುದು. 


ಜುಲೈ 3ರಂದು ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲಿಯೇ ದಾಖಲಾತಿ ಮಾಡಿಸಿಕೊಂಡು ತರಗತಿಗೆ ಹಾಜರಾಗುವುದಕ್ಕೂ ಅವಕಾಶ ಒದಗಿಸಿಕೊಡಲಾಗುತ್ತಿದೆ. ಈಗಾಗಲೇ ಅಂಬಿಕಾ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುತ್ತಿದ್ದು ತರಬೇತಿ ಪಡೆದ ಪ್ರತೀ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರು ಮೆಡಿಕಲ್ ಕಾಲೇಜುಗಳಲ್ಲಿ ದಾಖಲಾತಿ ಹೊಂದುತ್ತಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top