ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ PU ಕಾಲೇಜಿನ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ಶ್ರೀ ಭಾರತಿ ಶಾಲೆ ಆಲಂಗಾರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. 


ಪ್ರಥಮ ವಿಜ್ಞಾನ ವಿಭಾಗದ  ಘನಶ್ಯಾಮ ಹಾಗೂ  ಪೃಥ್ವಿಶ್ ಬಿ. ರೈ , ದ್ವಿತೀಯ ವಿಜ್ಞಾನ ವಿಭಾಗದ   ಸೃಜನ್ , ದ್ವಿತೀಯ ವಾಣಿಜ್ಯ ವಿಭಾಗದ ರಾಮ್ ಪ್ರಸಾದ್ ಬಿ.ಎನ್ ಹಾಗೂ ಪ್ರಾಪ್ತಿ ಶೆಟ್ಟಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ದ್ವಿತೀಯ ವಾಣಿಜ್ಯ ವಿಭಾಗದ ಪ್ರಮತ ಎಂ. ಭಟ್ ಬೆಳ್ಳಿಯ ಪದಕ, ಪ್ರಥಮ ವಾಣಿಜ್ಯ ವಿಭಾಗದ ತನ್ಮಯ್. ಎಲ್ ಕಂಚಿನ ಪದಕವನ್ನು ಪಡೆದಿರುತ್ತಾರೆ. 


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್., ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ಮಾರ್ಗದರ್ಶನದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top