ವಿವೇಕಾನಂದ PU ಕಾಲೇಜಿನಲ್ಲಿ ಜೀವಶಾಸ್ತ್ರ ವಿಭಾಗದ ಕಾರ್ಯಾಗಾರ

Upayuktha
0



ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಜೀವಶಾಸ್ತ್ರ ವಿಭಾಗದ ಕಾರ್ಯಾಗಾರ ನಡೆಯಿತು. ಪ್ರಶಾಂತ್ ಕುಮಾರ್ ಶೆಟ್ಟಿ ಉಪನ್ಯಾಸಕರು ಜೀವಶಾಸ್ತ್ರ ವಿಭಾಗ, ಸರಕಾರಿ ಪದವಿಪೂರ್ವ ಕಾಲೇಜು, ಅಳದಂಗಡಿ ಇವರು  ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾರ್ಯಾಗಾರ  ನಡೆಸಿಕೊಟ್ಟರು.


ಕಾರ್ಯಾಗಾರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ ಇವರು ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜು, ನರೇಂದ್ರ ಪದವಿಪೂರ್ವ ಕಾಲೇಜು, ಇಂದ್ರಪ್ರಸ್ಥ ಪದವಿಪೂರ್ವ ಹಾಗೂ ಶ್ರೀರಾಮ ಕಲ್ಲಡ್ಕ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕರು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕರಾದ ಮುರಳಿ ಪಿ.ಜಿ ಸ್ವಾಗತಿಸಿ, ನಿರೂಪಿಸಿ, ಡಾ. ಸುಶಾಂತ್ ವಿ. ರೈ ವಂದಿಸಿದರು.




إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top