ವಿವೇಕಾನಂದ PU ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿನಿ ಸಿಂಚನಲಕ್ಷ್ಮಿ ಜತೆ ಸಂವಾದ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಸಿಂಚನಲಕ್ಷ್ಮಿ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಇವರು 2021ರ ನೀಟ್‌ ಪರೀಕ್ಷೆಯ PWD ಕೆಟಗರಿಯಲ್ಲಿ 2ನೇ ರಾಂಕ್‌ ಪಡೆದು ಪ್ರಸ್ತುತ ದೆಹಲಿಯ AIIMS(All India Institute of Medical Science) ನಲ್ಲಿ ಎಂಬಿಬಿಎಸ್‌ ವಿದ್ಯಾಭ್ಯಾಸವನ್ನು ಪೂರೈಸುತ್ತಿದ್ದಾರೆ.


ಇವರು ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯ ತಯಾರಿ ಕುರಿತಾದ ಮಾಹಿತಿಗಳನ್ನು ನೀಡಿದರು. ಬಳಿಕ ಸಂವಾದ ಕಾರ್ಯಕ್ರಮವು ನಡೆಯಿತು. 2024-25 ನೇ ಸಾಲಿನ ವಿದ್ಯಾರ್ಥಿನಿ ವಸುಧಾ ಭಟ್‌ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ ಶಾಸ್ತ್ರಿ ನಿರ್ವಹಿಸಿದರು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top