ವಿವೇಕಾನಂದ PU ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ

Chandrashekhara Kulamarva
0



ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ  ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. 


ವಾರ್ಷಿಕ ಪರೀಕ್ಷೆಯ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯರಾದ ಅನುಶ್ರೀ ಹಾಗೂ ಅಪರ್ಣ ಅಡಿಗ  ತಮ್ಮ ಅನುಭವಗಳನ್ನು ಹಂಚಿಕೊಂಡರು. ಅನುಶ್ರೀ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರಾಂಕ್ ಹಾಗೂ ಅಪರ್ಣ ಅಡಿಗ 593 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರಾಂಕ್ ಗಳಿಸಿದ್ದರು.  


ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್  ರೈ ಎಂ, ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ. ಎನ್, ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ. ಎ. ಎಂ  ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರು ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗಿಯಾದರು. ವಿದ್ಯಾರ್ಥಿನಿ ಮನ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.



إرسال تعليق

0 تعليقات
إرسال تعليق (0)
To Top