ಜುಲೈ 25 - 26; ವಿವೇಕಾನಂದ PU ಕಾಲೇಜಿನಲ್ಲಿ ಕಾರ್ಗಿಲ್ ವಿಜಯ - ಯೋಧ ನಮನ

Upayuktha
0

ನಿವೃತ್ತ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮ 



ಪುತ್ತೂರು: ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿ 26 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ  ʼ ಕಾರ್ಗಿಲ್ ವಿಜಯ - ಯೋಧ ನಮನ ʼ ಕಾರ್ಯಕ್ರಮ ಜುಲೈ 25 ಹಾಗೂ 26 , 2025 ನೇ ಶುಕ್ರವಾರ ಹಾಗೂ ಶನಿವಾರ ಬೆಳಗ್ಗೆ  9:00 ಕ್ಕೆ ಸರಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ  ಸಶಸ್ತ್ರ ಪಡೆಗಳ ವೀರಗಾಥೆಯನ್ನು ಸ್ಮರಿಸುತ್ತಾ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರಿಗೆ ಈ ಸಂದರ್ಭದಲ್ಲಿ ನಮನ ಸಲ್ಲಿಸಲಾಗುವುದು.


ಕಾರ್ಗಿಲ್ ವಿಜಯ :

ಕಾರ್ಗಿಲ್ ವಿಜಯ ದಿವಸ ಆಚರಣೆ ಪ್ರಯುಕ್ತ 25 ಜುಲೈ 2025 ರಂದು ನಡೆಯುವ ಕಾರ್ಗಿಲ್ ವಿಜಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ವತ್ಸಲಾರಾಜ್ಞಿ .ಎಮ್ ವಹಿಸಲಿದ್ದಾರೆ.


ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ಆಗಿರುವ ರಾಜೇಶ್ ಪದ್ಮಾರ್ ಹಾಗೂ ಭಾರತೀಯ ಸೇನೆಯ 40 ಮೀಡಿಯಂ ರೆಜಿಮೆಂಟ್ ನಿವೃತ್ತ ಯೋಧ ಸುಬ್ಬಪ್ಪ ಪಾಟಾಳಿ ಭಾಗವಹಿಸಲಿದ್ದಾರೆ.


ಯೋಧ ನಮನ:

ಭಾರತ ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ ದಿನವಾದ ಜುಲೈ 26ರಂದು ಯೋಧ ನಮನ ಕಾರ್ಯಕ್ರಮ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್. ಸುಬ್ರಹ್ಮಣ್ಯ ಅವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಸಬ್ ಇನ್ ಸ್ಪೆಕ್ಟರ್ ಆದ ಬಾಲಕೃಷ್ಣ ಎನ್. ಎ. ಹಾಗೂ ನಿವೃತ್ತ ಸಹಾಯಕ ಸಬ್ ಇನ್ ಸ್ಪೆಕ್ಟರ್ ಆದ ಪದ್ಮನಾಭ ಸೊರಂಜಾ ಇವರನ್ನು ಗೌರವಿಸಲಾಗುವುದು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top