ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ವಿದ್ಯಾರ್ಥಿಗಳಿಗೆ “ಪಿಯುಸಿ ಪರೀಕ್ಷಾ ಒಳನೋಟ” ಶೀರ್ಷಿಕೆಯಡಿ ಮೊದಲ ಉಪನ್ಯಾಸ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್, ದೇವಿಪ್ರಸಾದ್‌ಹಾಗೂ ಉಷಾ ಎ ಎಂ ಇವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಬದಲಾದ ಪ್ರಶ್ನೆಪತ್ರಿಕೆಯ ಮಾದರಿ ಹಾಗೂ ಪರೀಕ್ಷೆಯ ತಯಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ