ವಿವೇಕಾನಂದ PU ಕಾಲೇಜಿನಲ್ಲಿ ʼವಿವೇಕ ಪ್ರದೀಪ್ತಿ -2025’

Chandrashekhara Kulamarva
0



ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದಿನಾಂಕ 19-07-2025 ರ ಶನಿವಾರದಂದು  ʼವಿವೇಕ ಪ್ರದೀಪ್ತಿ-2025ʼ ಶೀರ್ಷಿಕೆಯಡಿ 2024-25 ನೇ ಶೈಕ್ಷಣಿಕ ಸಾಲಿನ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. 


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರೀಷ್ಮ ವಿವೇಕ್ ಆಳ್ವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಳ್ವಾಸ್ ಫಾರ್ಮಸಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಹಾಗೂ ಹಿರಿಯ ವಿದ್ಯಾರ್ಥಿ, ವಿವೇಕಾನಂದ ಪದವಿ ಪೂರ್ವ ಕಾಲೇಜು ಪುತ್ತೂರು ಇವರು ಭಾಗವಹಿಸಲಿದ್ದಾರೆ. 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ .ಪಿ ವಹಿಸಿಕೊಳ್ಳಲಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿದ  ಹಾಗೂ ಜೆ.ಇ.ಇ, ನೀಟ್‌, ಸಿ.ಇ.ಟಿ, ಸಿ.ಎ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್‌ ಶೆಣೈ .ಕೆ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಂ. ದೇವಿಚರಣ್‌ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ಹಿರಿಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top