ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ

Upayuktha
0


ಉಜಿರೆ: ”ಕಾಳುಮೆಣಸಿನ ರಾಣಿ” ಎಂದೇ ಚಿರಪರಿಚಿತರಾದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆಚೀಟಿಯನ್ನು ಶುಕ್ರವಾರ ದೆಹಲಿಯಲ್ಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಡುಗಡೆಗೊಳಿಸಿದರು.


ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಜೈನಕಾಶಿ ಮೂಡಬಿದ್ರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ನಾರಾವಿ ಮತ್ತು ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಹೊನ್ನಾವರದಲ್ಲಿ ರಾಣಿ ಚೆನ್ನಭೈರಾದೇವಿ ಸ್ಮಾರಕ ಉದ್ಯಾನ ನಿರ್ಮಿಸಲು ಯೋಜಿಸಿದ್ದು ಸರ್ಕಾರ ಇದಕ್ಕಾಗಿ ಸೂಕ್ತ ಜಾಗವನ್ನು ಮಂಜೂರು ಮಾಡಿದೆ. ಭರದಿಂದ ಸಿದ್ಧತೆಗಳು ನಡೆಯುತ್ತಿವೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top