ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ: ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ

Upayuktha
0


ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ. ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡವನ್ನು ಶುಕ್ರವಾರ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ‌ ಮೆಚ್ಚುಗೆ ವ್ಯಕ್ತಪಡಿಸಿದರು.


ಜಿಲ್ಲಾ ಕೇಂದ್ರದಲ್ಲಿ ದ.ಕ. ರೆಡ್ ಕ್ರಾಸ್ ಸಂಸ್ಥೆ ಸಭಾಂಗಣ ಸಹಿತ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ರೆಡ್ ಕ್ರಾಸ್ ನ ಸೇವಾಕಾರ್ಯಗಳಿಗೆ ನೂತನ ಕಟ್ಟಡ ಇನ್ನಷ್ಟು ಶಕ್ತಿ ನೀಡಲಿ ಎಂದು ಸಚಿವರು ಹಾರೈಸಿದರು. ರೆಡ್ ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಸಚಿವರನ್ನು ಗೌರವಿಸಿದರು.


ಎಂಎಲ್ ಸಿ ಐವನ್ ಡಿಸೋಜಾ, ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಸಮಿತಿ ಅಧ್ಯಕ್ಷ ಪುಷ್ಪರಾಜ್ ಜೈನ್, ಖಜಾಂಜಿ ಮೋಹನ್ ಶೆಟ್ಟಿ.ಕೆ., ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ. ಸಚ್ಚಿದಾನಂದ ರೈ, ಪಿ.ಬಿ. ಹರೀಶ್ ರೈ, ಮಾಜಿ ಕಾರ್ಪೋರೇಟರ್ ಎ.ಸಿ. ವಿನಯರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್ ಡಿ.ಎಸ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top