ರೆಡ್‌ಕ್ರಾಸ್ ಸಮಿತಿಯಿಂದ ಜಿಲ್ಲಾಧಿಕಾರಿ ಭೇಟಿ

Chandrashekhara Kulamarva
0


ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಆಡಳಿತ ಸಮಿತಿ ಸದಸ್ಯರು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರನ್ನು ಭೇಟಿಯಾಗಿ ಸ್ವಾಗತಿಸಿದರು. 


ಜಿಲ್ಲಾ ರೆಡ್‌ಕ್ರಾಸ್ ಹಮ್ಮಿಕೊಂಡಿರುವ ಸೇವಾ ಕಾರ್ಯ ಹಾಗೂ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 6 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿರುವ ಬಗ್ಗೆ ಸಮಿತಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ವಿವರ ನೀಡಿದರು.


ಶೀಘ್ರದಲ್ಲೇ ಕಟ್ಟಡ ವೀಕ್ಷಿಸಲು ಆಗಮಿಸುವುದಾಗಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ರೆಡ್‌ಕ್ರಾಸ್‌ನ ಉಪಾಧ್ಯಕ್ಷ  ಡಾ. ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್‌ ಚಂದ್ರ ಹೆಗ್ಡೆ, ನಿರ್ದೇಶಕ ಡಾ. ಸಚ್ಚಿದಾನಂದ ರೈ, ಗುರುದತ್ ನಾಯಕ್, ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top