ಮಂಗಳೂರು: ತುಳುಕೂಟ (ರಿ) ಕುಡ್ಲ ನಡೆಸಿಕೊಂಡು ಬರುತ್ತಿರುವ ತುಳು ಪ್ರತಿಭಾ ಪುರಸ್ಕಾರಕ್ಕೆ ಮಾತ್ರಭಾಷೆ ತುಳುವಾಗಿದ್ದು, ಕನ್ನಡ ಮಾಧ್ಯಮದಲ್ಲಿ ಕಲಿತು ಗರಿಷ್ಠ ಅಂಕ ಗಳಿಸಿರುವ S.S.L.C ಮತ್ತು P.U.C ಯ ತಲಾ ಒಬ್ಬೊಬ್ಬರನ್ನು ಆಯ್ಕೆ ಮಾಡಲಾಗುತ್ತದೆ. 2024-2025 ನೇ ಸಾಲಿನ ಪುರಸ್ಕಾರ ಕಾರ್ಯಕ್ರಮವು ಇದೇ ಬರುವ ಜುಲೈ 27ರ ಭಾನುವಾರ, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಬಲ್ಲಾಳ ಭಾಗ್ ನ "ಪತ್ತುಮುಡಿ ಸೌಧ"ದಲ್ಲಿ ನಡೆಯಲಿದೆ.
ಈ ಬಾರಿಯ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದವರು ಕೊಡ್ಮಾಣ್‌ನ ಸರಕಾರಿ ಪ್ರೌಢಶಾಲೆಯ ಉಜ್ವಲ್ (10ನೇ) ಹಾಗೂ ವಿವೇಕಾನಂದ ಪಿ.ಯು. ಕಾಲೇಜಿನ ಆಕಾಶ್ ಎಂದು ತುಳುಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ ಬಿ. ಹಾಗೂ ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ