ಸಾಗರ: ಸೋಮವಾರ ಉದ್ಘಾಟನೆಯಾದ ಸಾಗರ ತಾಲೂಕಿನ ಅಂಬಾರಗೋಡ್ಲು- ಕಳಸವಳ್ಳಿ ಸೇತುವೆಯನ್ನು ಸೇತುವೆಯನ್ನು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಉದ್ಘಾಟಿಸಿದರು. ನೂತನ ಸೇತುವೆಗೆ ‘ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ.
ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಿಸಲಾದ ಬಹುದೊಡ್ಡ ಎಂಜಿನಿಯರಿಂಗ್ ಕೌತುಕ ಇದಾಗಿದ್ದು, ಒಟ್ಟು 2.14 ಕಿ.ಮೀ ಉದ್ದವಿದೆ. ಈ ಸೇತುವೆ ಉದ್ಘಾಟನೆಯೊಂದಿಗೆ ಮಲೆನಾಡಿನ ಜನತೆಯ ಬಹುದೊಡ್ಡ ಕನಸು ನನಸಾಗಿದೆ. 423 ಕೋಟಿ ರೂ.ಗಳ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣಗೊಂಡಿದೆ.
ಸೇತುವೆಗೆ ಹಲವಾರು ಹೆಸರುಗಳ ಸಲಹೆಗಳು ಬಂದಿದ್ದವು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಕೆಲವರು ಹೈಕೋರ್ಟ್‌ಗೂ ಹೋಗಿದ್ದರು. ಆದರೆ, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ನೂತನ ಐತಿಹಾಸಿಕ ಸೇತುವೆಗೆ ‘ಸಿಗಂದೂರು ಚೌಡೇಶ್ವರಿ’ ಹೆಸರನ್ನು ಇಡಬೇಕೆಂದು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಕಡತದಲ್ಲಿಅಂಬಾರಗೋಡ್ಲು- ಕಳಸವಳ್ಳಿ ಸೇತುವೆ ಎಂದು ಇದ್ದರೂ, ಈ ಭಾಗದ ಬಹುಜನರ ಅಪೇಕ್ಷೆ ಮತ್ತು ಸಿಗಂದೂರು ಚೌಡೇಶ್ವರಿ ದೇವಿ ಕೃಪಾಶೀರ್ವಾದ ಎಲ್ಲರ ಮೇಲೆ ಇರಬೇಕು ಎಂಬ ಕಾರಣಕ್ಕೆ ಐತಿಹಾಸಿಕ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು ಇಡಬೇಕು ಎಂಬ ಸಮರ್ಥನೆಯನ್ನು ನೀಡಿದ್ದರು.
ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಗಡ್ಕರಿ ಸ್ಪಷ್ಟನೆ
ಸಿಂಗದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕರ್ನಾಟಕದ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಉದ್ಘಾಟನೆಗೆ ಗೈರುಹಾಜರಾಗಿದ್ದರು.
ಆದರೆ ಸಿದ್ದರಾಮಯ್ಯ ಅವರ ಆರೋಪಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, "ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ ಕರ್ನಾಟಕದ ಶಿವಮೊಗ್ಗದಲ್ಲಿ ಹಲವು ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಸೋಮವಾರ ನಡೆಯುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 11, 2025ರಂದು ಅಧಿಕೃತ ಆಹ್ವಾನವನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವಂತೆ ಅವರಿಗೆ ಆಹ್ವಾನ ನೀಡಲಾಯಿತು. ಯಾವುದಾದರೂ ಪೂರ್ವ ನಿಗದಿತ ಕಾರ್ಯಕ್ರಮ ಇದ್ದು, ವೇಳಾಪಟ್ಟಿಯ ತೊಂದರೆ ಇದ್ದಲ್ಲಿ ಜುಲೈ 12 ರಂದು ಅವರ ವರ್ಚುವಲ್ ಉಪಸ್ಥಿತಿಯನ್ನು ಕೋರಿ ಮುಂದಿನ ಪತ್ರವನ್ನು ಕಳುಹಿಸಲಾಯಿತು" ಎಂದು ವಿವರಿಸಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರ ಶಿಷ್ಟಾಚಾರವನ್ನು ಉಲ್ಲಂಘಿಸುತ್ತಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ನಿತಿನ್ ಗಡ್ಕರಿ, "ಕೇಂದ್ರ ಸರ್ಕಾರವು ಸ್ಥಾಪಿತ ಶಿಷ್ಟಾಚಾರಗಳನ್ನು ಎತ್ತಿಹಿಡಿಯುವುದನ್ನು ಮುಂದುವರೆಸಿದೆ. ಅಷ್ಟೇ ಅಲ್ಲ ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿಯ ಕೊಡುಗೆಗಳು ಮತ್ತು ಸಹಕಾರವನ್ನು ಕೂಡ ನಿರಂತರವಾಗಿ ಶ್ಲಾಘಿಸಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆ ಮತ್ತು ಎಲ್ಲಾ ರಾಜ್ಯಗಳೊಂದಿಗೆ ನಿಕಟ ಸಮನ್ವಯಕ್ಕೆ ಕೇಂದ್ರ ಬದ್ಧವಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ