ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು.
ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರನ್ನು ಗೌರವದಿಂದ ಕಾಣುವ ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಹಿರಿಯರ ಮಾರ್ಗದರ್ಶನದಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯವಿದೆ ಎಂದು ಅವರು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಮಾತನಾಡಿ ಹೊರ ಜಿಲ್ಲೆಗಳಲ್ಲಿಯೂ ಪ್ರತಿಷ್ಠಾನದ ಘಟಕಗಳನ್ನು ಆರಂಭಿಸುವ ಮೂಲಕ ಸೇವಾ ಚಟುವಟಿಕೆಗಳನ್ನು ವಿಸ್ತರಿಸಲು ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳು ಘಟಕದಿಂದ ನಡೆಸಿದ ಕಾರ್ಯಕ್ರಮದ ಮಾಹಿತಿ ನೀಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ವಿಚಾರ ವಿನಿಮಯದಲ್ಲಿ ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷ ಯಂ. ಜಯರಾಮ ಭಂಡಾರಿ ಧರ್ಮಸ್ಥಳ, ಲೋಕೇಶ್ ಹೆಗ್ಡೆ ಪುತ್ತೂರು, ಕೋಶಾಧಿಕಾರಿ ಅನಾರು ಕೃಷ್ಣ ಶರ್ಮ, ಬಿ. ಭುಜಬಲಿ ಧರ್ಮಸ್ಥಳ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಸಂಚಾಲಕ ಭವಾನಿ ಶಂಕರ್ ಶೆಟ್ಟಿ ಪುತ್ತೂರು, ಪದ್ಯಾಣ ಕೇಶವ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾಣ್ಯಪ್ಪ ನಾಯ್ಕ್ ಉಜಿರೆ, ದಿನೇಶ್ ಗೌಡ ಗೇರುಕಟ್ಟೆ, ಉದಯಶಂಕರ ರೈ.ಕೆ, ರವೀಂದ್ರ ಶೆಟ್ಟಿ ಬಳೆಂಜ, ವಿಶ್ವಾಸ್ ರಾವ್ ಬೆಳ್ತಂಗಡಿ, ಸಾಂತೂರು ಶ್ರೀನಿವಾಸ ತಂತ್ರಿ, ಬಿ ಕುಸುಮಾವತಿ, ಗೋಪಾಲಕೃಷ್ಣ ಭಟ್ ಕಾಂಚೋಡು ಉಜಿರೆ, ಗಣೇಶ್ ಭಟ್ ಕುತ್ರೋಟ್ಟು, ಪ್ರೊ.ವೇದವ್ಯಾಸ ರಾಮಕುಂಜ, ಎಂ. ವಿಶ್ವನಾಥ ಶೆಟ್ಟಿ ಸುಲ್ಕೇರಿ ಉಪಸ್ಥಿತರಿದ್ದರು.
ಜಿಲ್ಲಾ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಬೆಳ್ತಂಗಡಿ ಘಟಕ ಕಾರ್ಯದರ್ಶಿ ಗಣೇಶ್ ಭಟ್. ಕೆ.ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕೆ. ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ