ಕುಮಟಾ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಯು ಕೋನಳ್ಳಿಯ ಶ್ರೀ ವನದುರ್ಗಾ ದೇವಾಲಯದಲ್ಲಿ ಜುಲೈ 10 ರಿಂದ ದಿನಾಂಕ ಆಗಸ್ಟ್ 20ರ ವರೆಗೆ ನಡೆಯಲಿದೆ.
ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀರಾಮದೇವರ ಕೃಪೆಗೆ ಪಾತ್ರರಾಗಿ ಗುರುಗಳಿಂದ ಮಂತ್ರಾಕ್ಷತೆಯನ್ನು ಪಡೆದು ಪುನೀತರಾಗಬೇಕಾಗಿ ಚಾತುರ್ಮಾಸ್ಯ ಸಮಿತಿಯ ಸಂಘಟಕರು ವಿನಂತಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ನಾಮಧಾರಿ ಸಂಘಗಳ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶ್ರೀರಾಮ ಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಮಸ್ತ ಸಮಾಜ ಬಾಂಧವರು ಕುಟುಂಬ ಸಮೇತರಾಗಿ ಪಾಲ್ಗೊಳ್ಳಬೇಕೆಂದು ಗುರುಗಳು ಹಾಗೂ ಕುಮಟಾ ತಾಲೂಕಿನ ಸಮಾಜದ ಅಧ್ಯಕ್ಷರು ಆಮಂತ್ರಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ