"ಹಲವಾರು ಶವಗಳನ್ನು ಹೂತಿದ್ದೆ" ಎಂಬ ದೂರು ಪ್ರಕರಣ: ಎಸ್‌ಐಟಿ ತನಿಖೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತ

Upayuktha
0



ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 'ಹಲವಾರು ಶವಗಳನ್ನು ಹೂತಿಟ್ಟಿದ್ದೆ' ಎಂಬ ದೂರು ಪ್ರಕರಣದ ಬಗ್ಗೆ ರಾಜ್ಯ ಸರಕಾರ ವಿಶೇಷ ತನಿಖಾ ದಳದಿಂದ (ಎಸ್ಐಟಿ) ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.


ಈ ಕುರಿತು ಕ್ಷೇತ್ರದ ವತಿಯಿಂದ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ''ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ "ಹಲವಾರು ಶವಗಳನ್ನು ಹೂತಿದ್ದೆ" ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕ ವಿತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ'' ಎಂದು ಪ್ರತಿಕ್ರಿಯಿಸಿದ್ದಾರೆ.


ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ "ಸತ್ಯ" ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಅವರು ಹೇಳಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top