ಶಿಕ್ಷಕರ ಸಮರ್ಪಣಾ ಭಾವದಿಂದ ಸಮಾಜಕ್ಕೆ ಶ್ರೇಯಸ್ಸು: ಡಾ.ಕೆ.ಎಂ. ಕೃಷ್ಣ ಭಟ್

Upayuktha
0

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪುನಶ್ಚೇತನ ಕಾರ್ಯಾಗಾರ




ಪುತ್ತೂರು: ಗುರು ಎಂದರೆ ವ್ಯಕ್ತಿಯಲ್ಲ ಅದೊಂದು ಶಕ್ತಿ ಎನ್ನುವಂತೆ ಶಿಕ್ಷಕರು ಬೆಳೆಯಬೇಕು. ಶಿಕ್ಷಕರ ಸಮರ್ಪಣಾ ಭಾವದಿಂದ ಒಂದು ಸಂಸ್ಥೆ ಬಲಿಷ್ಠವಾಗಿ ಬೆಳೆಯಬಹುದು ಹಾಗೂ ಸಮಾಜಕ್ಕೂ ಇದರಿಂದ ಶ್ರೇಯಸ್ಸು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹೇಳಿದರು.


ವಿವೇಕಾನಂದ ಕಲಾ, ವಿಜ್ಞಾನ, ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಿಗೆ ಸೋಮವಾರ ಆಯೋಜಿಸಲಾದ 'ಸಮರ್ಪಣಾ' ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಶಿಕ್ಷಕರು ಸಮರ್ಪಣೆ ಹಾಗೂ ಸಮನ್ವಯದ ಮೂಲಕ ವಿದ್ಯಾರ್ಥಿಗಳನ್ನು ಬೆಳೆಸಬೇಕು. ಈ ಮೂಲಕ ಶಿಕ್ಷಕ ಯಶಸ್ವಿಯಾಗುವ ಜತೆಗೆ ಶಿಕ್ಷಣ ಸಂಸ್ಥೆಗಳನ್ನೂ ಬೆಳೆಸುವ ಮಹಾನ್ ಕಾರ್ಯ ಸಾಕಾರವಾಗುತ್ತದೆ ಎಂದವರು ಹೇಳಿದರು.


ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ, ಶೈಕ್ಷಣಿಕ ವರ್ಷದ ಸಾಧನೆ ಚಟುವಟಿಕೆಗಳನ್ನು ಅವಲೋಕಿಸುವುದು ಈ ಕಾರ್ಯಕ್ರಮದ ಉದ್ದೇಶ. ನೂತನ ಶೈಕ್ಷಣಿಕ ವರ್ಷಕ್ಕೆ ನಮ್ಮನ್ನು ನಾವು ಸಿದ್ದಗೊಳಿಸಲು ಇದು ಅತ್ಯಂತ ಪೂರಕವಾದ ಕಾರ್ಯಾಗಾರ. ಶಿಕ್ಷಕರು ಸಂಸ್ಥೆಯ ಉದ್ದೇಶ ಹಾಗೂ ಸಿದ್ದಾಂತಗಳನ್ನು ಅರ್ಥೈಸಿಕೊಂಡು ಸಮರ್ಪಣಾ ಭಾವದಿಂದ ಕಾರ್ಯ ನಿರ್ವಹಿಸಿದರೆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟದ ಅಭಿವೃದ್ಧಿಯನ್ನು ಪಡೆಯಲು ಸಾಧ್ಯ ಎಂದರು.


ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ ನಾಯಕ್, ಕಾಲೇಜಿನ ಐಕ್ಯೂಎಸಿ ಸಂಯೋಜಕಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಉಪಸ್ಥಿತರಿದ್ದರು.

ಎಸ್ ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಎ ಕುಮಾರ‌ ಹೆಗಡೆ ಹಾಗೂ ಬೆಟ್ಟಂಪಾಡಿ‌ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಕಾಂತೇಶ ಸಣ್ಣಿಂಗಮ್ಮನವರ ಅವರು ಕಾರ್ಯಾಗಾರ ನಡೆಸಿಕೊಟ್ಟರು.


ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಶೇಷ ಅಧಿಕಾರಿ ಪ್ರೊ. ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿದರು. ಉಪಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ, ಡೀನ್ ಡಾ.ವಿಜಯ ಸರಸ್ವತಿ ನಿರೂಪಿಸಿದರು.



ಶಿಕ್ಷಕರು ಕೌಶಲ್ಯ ಬೆಳೆಸಿ: ಡಾ.ಶ್ರೀಪತಿ ಕಲ್ಲೂರಾಯ

ಸಮಾರೋಪ ಸಮಾರಂಭದಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ‌ ಕಲ್ಲೂರಾಯ ಅವರು ಪ್ರದಾನ ಭಾಷಣ ಮಾಡಿದರು.

ಆಧುನಿಕ ಜಗತ್ತಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸುಲಭದ ಮಾತಲ್ಲ. ಶಿಕ್ಷಕರು ಇಂದು ಅನೇಕ ರೀತಿಯ ಒತ್ತಡ ಹಾಗೂ ಪೈಪೋಟಿಯನ್ನು ಎದುರಿಸುವ ಸ್ಥಿತಿ ಎದುರಾಗಿದೆ. ಹಾಗಾಗಿ ಶಿಕ್ಷಕರು ತಮ್ಮೊಳಗೆ ಕೌಶಲ್ಯಗಳನ್ನು ಹೆಚ್ಚಿಸಿಕೊಂಡು ಆಧುನಿಕ ತಂತ್ರಜ್ಞಾನವನ್ನು ವೃದ್ಧಿಸಿಕೊಂಡು ವಿದ್ಯಾರ್ಥಿಗಳನ್ನು ಬೆಳೆಸಬೇಕು. ವಿದ್ಯಾರ್ಥಿಗಳನ್ನು ಇಂದು‌ ಪ್ರೀತಿಯಿಂದ ಮಾತನಾಡಿಸಿ ಜ್ಞಾನವನ್ನು ಹಂಚಿಕೊಳ್ಳಬೇಕಾಗಿದೆ. ಶಿಕ್ಷಕರು ಇಂದು ಬದಲಾದ ವ್ಯವಸ್ಥೆಗೆ ತನ್ನನ್ನು ತಾನು ಒಗ್ಗಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top