ಮಂಗಳೂರು: ಕಾಸರಗೋಡು ಜಿಲ್ಲೆ ಮಂಜೇಶ್ವರದ ಸುಂಕದಕಟ್ಟೆ ನಿವಾಸಿ, ಪ್ರಸ್ತುತ ತಲಪಾಡಿಯ ಉಚ್ಚಿಲ ನಿವಾಸಿಯಾಗಿದ್ದ ರಂಗಕರ್ಮಿ ಎಂ.ಎಸ್. ಗೋಪಾಲಕೃಷ್ಣ ರಾವ್ (70) ಅವರು ಅಲ್ಪಕಾಲದ ಅಸೌಖ್ಯದಿಂದ ಜು.25 ರಂದು ಆಸ್ಪತ್ರೆಯಲ್ಲಿ ನಿಧನರಾದರು.
ಸುಮಾರು ಮೂರು ದಶಕಗಳ ಕಾಲ ಕ್ಯಾಂಪ್ಕೋ ಸಂಸ್ಥೆಯ ನಾನಾ ಶಾಖೆಗಳಲ್ಲಿ ಸೇವೆ ಸಲ್ಲಿಸಿ, ಪ್ರಬಂಧಕರಾಗಿ ನಿವೃತ್ತರಾಗಿದ್ದರು. ನಾನಾ ಸಂಘ ಸಂಸ್ಥೆಗಳಲ್ಲಿ ನಾನಾ ಹುದ್ದೆಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು. ಸ್ಥಳೀಯ ರಂಗ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಅವರು, ಹತ್ತು ಹಲವು ನಾಟಕಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಗಣರಾಜ್ಯೋತ್ಸದಲ್ಲಿ ರಾಜ್ಯದ ಸಾಂಸ್ಕೃತಿಕ ತಂಡವನ್ನು ಪ್ರತಿನಿಧಿಸಿ ಅಂದಿನ ರಾಷ್ಟ್ರಪತಿ ಶಂಕರ ದಯಾಳ್ ಶರ್ಮಾ ಅವರಿಂದ ಪುರಸ್ಕಾರ ಪಡೆದಿದ್ದರು. ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ