ನಾಳೆ ವನಮಹೋತ್ಸವ, ಮಳೆ ನೀರು ಕೊಯ್ಲು ಜಾಗೃತಿ

Upayuktha
0



ಮಂಗಳೂರು: ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಮತ್ತು ಯೇನೆಪೊಯ ನರ್ಸಿಂಗ್ ಕಾಲೇಜ್ ವತಿಯಿಂದ ಜು.8 ರಂದು ಬೆಳಗ್ಗೆ 9.30ಕ್ಕೆ ನರಿಂಗಾನ‌ ಕಳ್ಳರಕೋಡಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವನಮಹೋತ್ಸವ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಕಾರ್ಯಕ್ರಮ ನಡೆಯಲಿದೆ.


ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ನಿರ್ದೇಶಕ ಪಿ.ಬಿ. ಹರೀಶ್ ರೈ, ಯೇನೆಪೊಯ ನರ್ಸಿಂಗ್ ಕಾಲೇಜಿನ‌ ಉಪ ಪ್ರಾಂಶುಪಾಲೆ ಡಾ.ಪ್ರಿಯಾ ರೇಶ್ಮಾ ಅರನ್ಹಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನರಿಂಗಾನ‌ ಗ್ರಾಮ ಪಂಚಾಯಿತಿ ಅಧ್ಯಕ್ಷ ನವಾಝ್‌ ಎಂ.ಬಿ ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ.ಶ್ವೇತಾ ಪ್ರಭು ಅವರು ಮಕ್ಕಳಲ್ಲಿ ವಾಕ್, ಶ್ರವಣ ದೋಷ ವಿಷಯದ ಬಗ್ಗೆ ಹಾಗೂ ಡಾ.ಪ್ರಶಾಂತ್ ನಾಯ್ಕ್ ಅವರು ಮಳೆ ನೀರು ಕೊಯ್ಲು ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಯೇನೆಪೊಯ ವಿ.ವಿ. ಯೂತ್ ರೆಡ್‌ಕ್ರಾಸ್ ಘಟಕದ ನೋಡಲ್ ಅಧಿಕಾರಿ ನಿತ್ಯಶ್ರೀ ಬಿ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top