ವಿಸಿಇಟಿ ಸಂಸ್ಥಾಪಕ ಪ್ರಾಂಶುಪಾಲ ಪ್ರೊ. ಜಿ.ಆರ್. ರೈ ಅವರಿಗೆ ಶ್ರದ್ಧಾಂಜಲಿ

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಥಾಪಕ ಪ್ರಾಂಶುಪಾಲರಾಗಿ ಕಾಲೇಜಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಪ್ರೊ. ಜಿ.ಆರ್. ರೈ ಅವರು ಇಂದು ವಿಧಿವಶರಾಗಿದ್ದು ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸಲಾಯಿತು.


ನುಡಿ ನಮನವನ್ನು ಸಲ್ಲಿಸಿದ ಪ್ರಾಂಶುಪಾಲ ಡಾ.ಮಹೇಶ್‌ ಪ್ರಸನ್ನ.ಕೆ ಮಾತನಾಡಿ, ಸಿವಿಲ್ ಇಂಜಿನಿಯರ್ ಆಗಿದ್ದ ಪ್ರೊ. ಜಿ. ಆರ್. ರೈ ಅವರು ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆಯಲ್ಲಿ ಸಲ್ಲಿಸುತ್ತಾ ಅದರ ಅಭಿವೃದ್ಧಿಗೆ ಶ್ರಮಿಸಿದವರು. ದಿ. ಉರಿಮಜಲು ರಾಮ ಭಟ್ ಅವರ ಬಾಲ್ಯ ಸ್ನೇಹಿತನಾಗಿದ್ದು ಅವರ ಒತ್ತಾಸೆಯ ಮೇರೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾರಂಭಕ್ಕೆ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿ ಅದರ ಸ್ಥಾಪಕ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅಗಲಿದ ಮಹಾನ್ ಚೇತನಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಎಂದರು. ಈ ಸಂದರ್ಭದಲ್ಲಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.


ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಹಾಜರಿದ್ದು  ಪುಷ್ಪ ನಮನ ಸಲ್ಲಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top