ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ಮಾಣಿ ನಿಧನ

Upayuktha
0


ಬಂಟ್ವಾಳ: ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.


ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌


ಪ್ರಸ್ತುತ ನಮ್ಮ‌ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ ಸಚಿನ್ ಮಾಣಿ ಯವರ ಹಲವು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದವರು. ಸ್ನೇಹಜೀವಿಯಾಗಿದ್ದ ಇವರ ಅಗಲಿಕೆ ಗ್ರಾಮದಲ್ಲಿ ಆಘಾತಕ್ಕೆ ಕಾರಣವಾಗಿದೆ. ಮೃತರು ತಾಯಿ, ಸಹೋದರ, ಪತ್ನಿ, ಪುಟ್ಟ ಮಗಳು ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top