ಜು.24 : ಅರಿವಿನ ಬೆಳಕು ಉಪನ್ಯಾಸ ಮಾಲೆ

Chandrashekhara Kulamarva
0



ಉಡುಪಿ :  ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜು, ಕಿದಿಯೂರು ಉಡುಪಿ ಇವರ ಸಹಯೋಗದಲ್ಲಿ  ಅರಿವಿನ ಬೆಳಕು ಉಪನ್ಯಾಸ ಮಾಲೆ -8 ಕಾರ್ಯಕ್ರಮವು ಜುಲೈ 24 ರಂದು ಮಧ್ಯಾಹ್ನ 2.30 ಕ್ಕೆ ಗಂಟೆಗೆ ಕಿದಿಯೂರಿನ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜ್ ಮೋಹನ್ ಉದ್ಘಾಟಿಸಲಿದ್ದು, ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ  ರಾಮಾಂಜಿ  ಭಾಗವಹಿಸಿ ಡಾ. ಶಿವರಾಮ ಕಾರಂತರ ಕೃತಿಗಳಲ್ಲಿ ಮಾನವೀಯ ಮೌಲ್ಯಗಳು ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top