ಉಡುಪಿ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತೀರ್ಥರೂಪರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿದ, ನಿವೃತ್ತ ಶಿಕ್ಷಕರಾದ ಎಂ.ಕೆ. ವಾಸುದೇವ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ಮೌನ ಪ್ರಾರ್ಥನೆಯೊಂದಿಗೆ ಸಂತಾಪ ಸಲ್ಲಿಸಲಾಯಿತು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅವರು ನುಡಿ ನಮನ ಸಲ್ಲಿಸಿ, ಮೃತರ ಆತ್ಮಕ್ಕೆ ಚಿರ ಶಾಂತಿ ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಮುಖರಾದ ಸತ್ಯಾನಂದ ನಾಯಕ್, ಶ್ರೀಕಾಂತ್ ನಾಯಕ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ವಿಜಯ ಕುಮಾರ್ ಉದ್ಯಾವರ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ