ಆ.3ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಫರ್ಧೆ: ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0


ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 48 ದಿನಗಳ ಕಾಲ ನಡೆಯಲಿರುವ ಮಂಡಲೋತ್ಸವ ಕಾರ್ಯಕ್ರಮದಲ್ಲಿ, ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ-2025 ಆಗಸ್ಟ್‌ 3ರ ಭಾನುವಾರದಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯಲಿದೆ. ಪತಂಜಲಿ ಯೋಗ ಸಮಿತಿ ಉಡುಪಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊ) ಬೆಂಗಳೂರು ಸಹಭಾಗಿತ್ವದಲ್ಲಿ ಈ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯ ಆಮಂತ್ರಣ ಪತ್ರಿಕೆ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ರಮಣಾಚಾರ್ಯ, ರಮೇಶ್ ಭಟ್, ರತೀಶ ತಂತ್ರಿ, ಉಡುಪಿ ಪತಂಜಲಿ ಜಿಲ್ಲಾ  ಪ್ರಭಾರಿಗಳಾದ ಕೆ. ರಾಘವೇಂದ್ರ ಭಟ್, ಅನಂತರಾಯ ಶೆಣೈ, ಜಗದೀಶ ಕುಮಾರ್, ಲೀಲಾ ಆರ್ ಅಮೀನ್, ಅಜೀವ ಸದಸ್ಯರಾದ ವಿಶ್ವನಾಥ್ ಭಟ್, ಸದಸ್ಯರಾದ ಶ್ಯಾಮಲ ಕೆ, ನಾಗರಾಜ ಶೇಟ್, ಶ್ರೀಪತಿ ಭಟ್, ಗಿರೀಶ ಉದ್ಯಾವರ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top