ಜು.22 : ಅರಿವಿನ ಬೆಳಕು ಉಪನ್ಯಾಸ ಮಾಲೆ

Chandrashekhara Kulamarva
0



ಉಡುಪಿ :  ಡಾ. ಶಿವರಾಮ ಕಾರಂತ ಟ್ರಸ್ಟ್  ವತಿಯಿಂದ ರಥಬೀದಿ ಗೆಳೆಯರು(ರಿ) ಉಡುಪಿ ಇವರ ಸಹಯೋಗದಲ್ಲಿ  ಅರಿವಿನ ಬೆಳಕು ಉಪನ್ಯಾಸ ಮಾಲೆ -7 ಕಾರ್ಯಕ್ರಮವು ಜುಲೈ 22 ರಂದು ಸಂಜೆ 4 ಗಂಟೆಗೆ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಹೆನ್ರಿ ಡುನ್ಯಾಂಟ್ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ  ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಡಾ.ಶಿವರಾಮ ಕಾರಂತರ ಬದುಕು ಮತ್ತು ಬರಹಗಳ ಪ್ರಸ್ತುತತೆ ವಿಷಯದ ಕುರಿತು ಉಪನ್ಯಾಸ ನೀಡಿ ಸಂವಾದ ನಡೆಸಲಿದ್ದಾರೆ. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 


ಮುಖ್ಯ ಅತಿಥಿಗಳಾಗಿ ಹಿರಿಯ ಭಾಷಾ ವಿಜ್ಞಾನಿ ನಾಡೋಜ ಡಾ. ಕೆ.ಪಿ ರಾವ್, ರಥಬೀದಿ ಗೆಳೆಯರು (ರಿ) ಉಡುಪಿ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ  ತಿಳಿಸಿದೆ. 

 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter                                                        


Post a Comment

0 Comments
Post a Comment (0)
To Top