ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕನ್ನಡ ಅಭಿವೃದ್ಧಿಯ ಬಗ್ಗೆ ವಿಶೇಷ ಸಭೆ ಮಾಡಿದ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ಸದಸ್ಯ ಯಾಕುಬ್ ಖಾದರ್ ಗುಲ್ವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ| ಗಣನಾಥ ಎಕ್ಕಾರು, ಪ್ರಾಧಿಕಾರದ ಅಧಿಕಾರಿಗಳು, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಸಾಹಿತಿ ಡಾ. ಕಾತ್ಯಾಯನಿ ಕುಂಜಿಬೆಟ್ಟು, ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕರ್ವಾಲು, ಸಿದ್ದ ಬಸಯ್ಯಸ್ವಾಮಿ ಚಿಕ್ಕಮಠ, ಕೃಷ್ಣಯ್ಯ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ