ಉಜಿರೆ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ.
ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಯ ವಾಚನ-ಪ್ರವಚನ ನಡೆಯುತ್ತದೆ. ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.
ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು. ಉದ್ಘಾಟನಾ ಸಮಾರಂಭ: ಜುಲೈ 16 ರಂದು ಬುಧವಾರ ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ