ಡಾ. ಗಾನವಿ ಡಿ ಅವರಿಗೆ ಪಿಎಚ್.ಡಿ ಪದವಿ

Upayuktha
0



ಉಜಿರೆ: ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ.


ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್.  ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ದಿನಾಂಕ 11 ಜುಲೈ 2025ರಂದು ಪಿಎಚ್.ಡಿ ಪದವಿ ನೀಡಲಾಯಿತು.


ಉಜಿರೆಯ ಲಲಿತನಗರದ ನಿವಾಸಿಯಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಧರ್ಮಪತ್ನಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top