ಉಜಿರೆ: ಕಳೆದು ಹೋಗಿರುವ ಸಾಹಿತ್ಯಾಭಿರುಚಿ ಮತ್ತೆ ಬೆಳೆಯಬೇಕು ಎಂದು ಪ್ರಸಿದ್ಧ ವಿಮರ್ಶಕ ಡಾ. ಹೆಚ್.ಎಸ್. ಸತ್ಯನಾರಾಯಣ ಹೇಳಿದರು. ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ಜು.15ರಂದು ಕನ್ನಡ ವಿಭಾಗದ 2025-26 ನೇ ಸಾಲಿನ ಕಾರ್ಯ ಚಟುವಟಿಕೆ ಹಾಗೂ ಕನ್ನಡ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. “ಇವತ್ತಿನ ಬದುಕು ಸಾಹಿತ್ಯದ ಸಂಪರ್ಕದಿಂದ ದೂರವಾಗುತ್ತಿದೆ. ಪುಸ್ತಕ ಓದುವ ಹವ್ಯಾಸ ಮಕ್ಕಳಲ್ಲಿ ದೂರವಾಗುತ್ತಿದೆ” ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಎಸ್.ಡಿ.ಎಂ. ಕಾಲೇಜಿನ ಹಾ.ಮಾ. ನಾಯಕ ಸಂಶೋಧನಾ ಕೇಂದ್ರವು ಸಕ್ರಿಯವಾಗಿ ಸಾಹಿತ್ಯದ ಬಗೆಗಿನ ಸಂಶೋಧನೆ ನಡೆಸುತ್ತಿದೆ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣಗಳು, ಇನ್ನಿತರ ಸಾಹಿತ್ಯಿಕ ಕಾರ್ಯಕ್ರಮ ನಡೆಸುತ್ತಿದೆ. ವಿದ್ಯಾರ್ಥಿಗಳ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ಕನ್ನಡ ಸಂಘವು ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಮೊದಲು 'ಚಿಂತನ ವೇದಿಕೆ' ಎಂದು ಎನ್.ಜಿ. ಪಟವರ್ಧನ್ ಅವರು ಆರಂಭಿಸಿದರು. ಬಳಿಕ ಅದು ಕನ್ನಡ ಸಂಘವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಈಗಿನ ಕಾಲದಲ್ಲಿ ಕೌಶಲ್ಯಗಳು ಮುಖ್ಯ. ಎಂದಿಗೂ ಧನಾತ್ಮಕವಾಗಿ ಚಿಂತನೆ ಮಾಡಬೇಕು. ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಹಾಗೂ ಹೊಸತನವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆ ಅವರನ್ನು ಸನ್ಮಾನಿಸಲಾಯಿತು. ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು. ಸಂಘದ ಪದಾಧಿಕಾರಿಗಳಾದ ಮಾನಸ, ಅಮೃತ, ರಂಗಸ್ವಾಮಿ, ಶಿಫಾನ, ಸ್ವಪ್ನಾ ಹಾಗೂ ಸಂಕೇತ್, ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್. ಸ್ವಾಗತಿಸಿದರು. ಸಂಕೇತ್ ವಂದಿಸಿದರು. ಜೀವಿತ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ