ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಉಜಿರೆಯ ರತ್ನಮಾನಸದಲ್ಲಿ ಜು.20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ರತ್ನಮಾನಸದ ಮೇಲ್ವಿಚಾರಕರಾದ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಜಗದೀಶ ಮುಂಡಾಜೆ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು.
ಪ್ರಥಮ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 25 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಶಕುಂತಲಾ. ಬಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ