ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗದ ಮುಖ್ಯಸ್ಥರಾದ ಡಾ. ಗಣರಾಜ್ ಕೆ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು "ಸೇವೆಯೇ ಧ್ಯೇಯವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು ದೇಶದ ಅಭಿವೃದ್ಧಿಗೆ ಬಹಳ ಕೊಡುಗೆ ನೀಡಿದೆ. ಅಲ್ಲದೆ ಸ್ವಯಂಸೇವಕರಿಗೆ ಸಮಾಜದ ಜೊತೆ ಒಡನಾಟವನ್ನು ಬೆಳೆಸಿ ಅವರ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿ. ಆದ್ದರಿಂದ ತಮ್ಮನ್ನು ಅದರಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ಮೂಡಿಸಿಕೊಳ್ಳಬೇಕು" ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ರವರು "ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಮುನ್ನಡೆದುಕೊಂಡು ಬಂದಿದೆ. ಇಲ್ಲಿನ ಸ್ವಯಂ ಸೇವಕರು ರಾಜ್ಯ, ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಮುಂದೆಯೂ ಇಂತಹ ಸಾಧನೆಗಳು ಮರುಕಳಿಸಲಿ" ಎಂದು ಹೇಳಿದರು.
ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಡಾ. ರಾಜೇಶ್ ಬಿ., ನಿಕಟ ಪೂರ್ವ ಯೋಜನಾಧಿಕಾರಿ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶ್ರೀಮತಿ ಶೋಭಾ ಪಿ ಇದ್ದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿ ಸದಸ್ಯರಾದ ಶ್ರೀಮತಿ ದಿವ್ಯ ಕುಮಾರಿ ಹಾಗೂ ನಾಗರಾಜ್ ಭಂಡಾರಿರವರು ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಸ್ವಯಂಸೇವಕಿಯರಾದ ಧನ್ಯ ನಿರೂಪಿಸಿದರು, ಮೇಘ ಸ್ವಾಗತಿಸಿದರು. ಗ್ರಂಥ ಧನ್ಯವಾದವಿತ್ತರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ