ನಾಳೆ ಉಳ್ಳಾಲದ ವೀರರಾಣಿ ಅಬ್ಬಕ್ಕ ಕಿರು ಚಿತ್ರ ಬಿಡುಗಡೆ

Chandrashekhara Kulamarva
0


ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ನಾಳೆ (ಜುಲೈ  18) ಬೆಳಿಗ್ಗೆ 10 ಗಂಟೆಗೆ ನಗರದ ಶಾರದಾ ವಿದ್ಯಾಲಯದ ಆಶ್ರಯದಲ್ಲಿ ರಾಣಿ ಅಬ್ಬಕ್ಕ  500ರ ಪ್ರೇರಣದಾಯಿ ಉಪನ್ಯಾಸ ಸರಣಿಯ 16ನೆ ಕಾರ್ಯಕ್ರಮದಲ್ಲಿ ಪ್ರಕಾಶ ಮಲ್ಪೆಯವರ ಪರಿಕಲ್ಪನೆಯಲ್ಲಿ ಉಳ್ಳಾಲದ ವೀರರಾಣಿ ಅಬ್ಬಕ್ಕ ಕಿರು ಚಿತ್ರ ಬಿಡುಗಡೆ ಸಮಾರಂಭ ನಡೆಯಲಿದೆ.


ಕಾರ್ಯಕ್ರಮವನ್ನು ಮಂಗಳೂರಿನ ಖ್ಯಾತ ವೈದ್ಯ ಡಾ. ವಾಮನ್ ಶೆಣೈ ಉದ್ಘಾಟಿಸಲಿದ್ದಾರೆ. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊಫೆಸರ್ ಎಂ ಬಿ ಪುರಾಣಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.


Post a Comment

0 Comments
Post a Comment (0)
To Top