ಕಾರ್ಕಳ: ನಿಟ್ಟೆಯ ಗ್ರಾಮೀಣ ವೈದ್ಯಕೀಯ ಮತ್ತು ಮನೋವೈದ್ಯಕೀಯ ಕೇಂದ್ರದಲ್ಲಿ ಇತ್ತೀಚೆಗೆ ವನಮಹೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಒಟ್ಟು ಹತ್ತು ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಉಪಾಧ್ಯಕ್ಷ (ಐಎಸ್ಆರ್ ಮತ್ತು ಸಿಆರ್ಎಲ್) ಡಾ.ಸತೀಶ್ ಕುಮಾರ್ ಭಂಡಾರಿ, ಕ್ಷೇಮಾದ ಸಂಯೋಜಕ ಮೇಜರ್ ಡಾ.ರಾಘವೇಂದ್ರ ಹುಚ್ಚಣ್ಣವರ್, ಎಬಿಎಸ್ಎಂಐಡಿಎಸ್ನ ಸಾರ್ವಜನಿಕ ಆರೋಗ್ಯ ದಂತವೈದ್ಯಕೀಯ ವಿಭಾಗದ ಮುಖ್ಯಸ್ಥೆ ಪ್ರೊ.ಡಾ.ಆಡ್ರಿ ಡಿಕ್ರೂಜ್, ಎನ್ಆರ್ಎಂಪಿಸಿಯ ಎಎಂಒ ಡಾ. ಪ್ರಕಾಶ್ ಕುಮಾರ್ ಶೆಟ್ಟಿ, ಡಾ. ಸುಭಾಷ್ ಶ್ರೀ, ಡಾ.ಸಂದೇಶ್ ಹೆಗ್ಡೆ, ಹಾಗೂ ವೈದ್ಯಕೀಯ ಕೇಂದ್ರದ ಸಿಬ್ಬಂದಿಗಳು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಮ್ಯೂನಿಟಿ ಮೆಡಿಸಿನ್ ವಿಭಾಗ ಮತ್ತು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಂಯೋಜಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ