ಗದಗ: ಕರ್ನಾಟಕದ ಗದಗ ಜಿಲ್ಲೆಯ ಮುಂಡರಗಿಯ ಚೈತನ್ಯ ಗ್ರಾಮೀಣಾಭಿವೃದ್ಧಿ ಮತ್ತು ಶೈಕ್ಷಣಿಕ ಸಂಸ್ಥೆ(ರಿ) ಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮುಂಡರಗಿಯ ಶ್ರೀಮತಿ ವೀಣಾ ಹೇಮಂತ್ ಗೌಡ ಪಾಟೀಲ್ ಅವರು ಕಳೆದ 15 ವರ್ಷಗಳಿಂದ ಮಹಿಳೆಯರ ಮತ್ತು ಮಕ್ಕಳ ಶೈಕ್ಷಣಿಕ ಕ್ಷೇಮಾಭಿವೃದ್ಧಿಗಾಗಿ ಕಾರ್ಯನಿರ್ವಹಿಸಿದ್ದು ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶಸ್ತಿ "SIWAA" ಸೌತ್ ಇಂಡಿಯಾ ವಿಮೆನ್ ಅಚೀವರ್ಸ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ.
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ವಿಭಾಗದಲ್ಲಿ ಅವರಿಗೆ ಭಾನುವಾರ (ಜುಲೈ 6) ಚೆನ್ನೈನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ನಡೆಯಲಿದೆ.
ಟ್ವೆಲ್ ಮ್ಯಾಗಜಿನ್ ಅವರು ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಗ್ಲೋಬಲ್ ಪಿಂಕ್ ಆರ್ಮಿ, ಬೇಟಿ ಬಚಾವೋ ಬೇಟಿ ಪಡಾವೋ, ಎಂಎಸ್‌ಎಂಇ (ಅತಿ ಸಣ್ಣ, ಕಿರು ಮಧ್ಯಮ ಸಂಸ್ಥೆ)ಇವುಗಳ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಶ್ರೀಮತಿ ವೀಣಾ ಪಾಟೀಲ್ ಅವರು ಶೈಕ್ಷಣಿಕ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ