ವಿಕಸಿತ ಭಾರತ ಅಭಿಯಾನ: ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣೆ

Chandrashekhara Kulamarva
0


ಮಂಗಳೂರು: ದೇಶಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಹೊಯ್ಗೆ ಬಜಾರಿನ ಜ್ಞಾನೋದಯ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನಮ್ಮ ದೇಶದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ದೇವರ ಸಮಾನರಾಗಿರುವ ಮುದ್ದು ಮಕ್ಕಳ ಶಾಲಾ ಚಟುವಟಿಕೆಗಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ನೀಡುತ್ತಿರುವ ಈ ಸಂದರ್ಭದಲ್ಲಿ ಅವರ ಮುಖದಲ್ಲಿ ಮಂದಹಾಸ ಕಾಣುವುದೇ ಒಂದು ಸಂಭ್ರಮ. ಸಣ್ಣಪುಟ್ಟ ವಿಷಯಗಳಲ್ಲೂ ಖುಷಿಯನ್ನು ಕಾಣುವ ಗುಣವನ್ನು ನಾವು ಮಕ್ಕಳಿಂದ ಕಲಿಯಬೇಕು ಎಂದು ಹೇಳಿ ಎಲ್ಲರಿಗೂ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ಪೂರ್ಣಿಮಾ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಅಶ್ವಿತ್ ಕೊಟ್ಟಾರಿ, ಭಾನುಮತಿ, ರಘುವೀರ್ ಬಾಬುಗುಡ್ಡ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ನಿತಿನ್ ಕುಮಾರ್, ರೇವತಿ, ನಾರಾಯಣ ಗಟ್ಟಿ, ಸುಮತಿ, ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು, ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top