ಬಂಟ್ವಾಳ: ಶಕ್ತಿ ವಿದ್ಯಾಸಂಸ್ಥೆ, ಮಂಗಳೂರು ಇದರ ಸಹಯೋಗದೊಂದಿಗೆ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ 10ನೇ ತರಗತಿಯ ಅನರ್ಘ್ಯ ಎ ಆರ್ ಇವರು ಭಾಗವಹಿಸಿ 200 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ 200 ಮೀ ಮತ್ತು 400 ಮೀ ಇಂಡಿವಿಜುಲ್ ಮೆಡ್ಲೆಗಳಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ರೇಷ್ಮೆ ಇಲಾಖೆಯ ನಿವೃತ್ತ ಇನ್‌ಸ್ಪೆಕ್ಟರ್ ಬಿ.ಕೆ ನಾಯಕ್ ಇವರ ಶಿಷ್ಯರಾಗಿದ್ದು ಮಂಗಳೂರಿನ ಸೈಂಟ್ ಅಲೋಸಿಸ್ ಈಜುಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ವಿನೋದ್ ಕಾರವಾರ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


