ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಶಾರದಾ ವಿದ್ಯಾಲಯ ಜಂಟಿ ಆಶ್ರಯದಲ್ಲಿ 111ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಜುಲೈ 31 ರಂದು ಶಾರದಾ ವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು.
ಶಾರದಾ ವಿದ್ಯಾಲಯ ಚೇರ್ಮೆನ್ ಡಾ. ಎಂ ಬಿ ಪುರಾಣಿಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಾಹಿತ್ಯ ಕಾರ್ಯಕ್ರಮಗಳು ನಿರಂತರ ನಡೆಯಬೇಕು. ವಿದ್ಯಾರ್ಥಿಗಳು ಪತ್ರಿಕೆ ಓದುವ ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು. ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ವಿದ್ಯಾಲಯ ಪ್ರಾಂಶುಪಾಲರಾದ ಚಂದ್ರಿಕಾ ಭಂಡಾರಿ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಕೃಷ್ಣಮೂರ್ತಿ ಅವರು ಮಾತನಾಡಿ, ಬಹುಭಾಷಾ ಕಲಿಕೆ ಇಂದಿನ ಅಗತ್ಯವಾಗಿದ್ದು ವಿದ್ಯಾರ್ಥಿಗಳು ಸೃಜನಶೀಲ ಸಾಹಿತ್ಯ ಸೃಷ್ಟಿಯೊಂದಿಗೆ ಅನುವಾದ ಕಾರ್ಯವನ್ನು ಮಾಡಬಹುದಾಗಿದೆ ಎಂದರು.
ನಿವೃತ್ತ ಕನ್ನಡ ಉಪನ್ಯಾಸಕಿ ಸುಮನ.ಜಿ ಮಾತನಾಡಿ, ಕನ್ನಡ ಮಾರ್ಗ ಸಾಹಿತ್ಯ ಹಾಗೂ ಜಾನಪದ ಸಾಹಿತ್ಯಗಳ ಮೂಲಕ ಸಮೃದ್ಧವಾಗಿ ಬೆಳಗಿದೆ ಎಂದರು. ವಿಜಯವಾಣಿ ದೈನಿಕದ ವರದಿಗಾರ ಹರೀಶ್ ಮೋಟುಕಾನ ಮಾತನಾಡಿ, ದಿನಪತ್ರಿಕೆ ವಾಚನ ಹವ್ಯಾಸದಿಂದ ಪ್ರಚಲಿತ ವಿದ್ಯಮಾನಗಳ ಅರಿವು ಹೆಚ್ಚಾಗುತ್ತದೆ ಎಂದರು.
ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು, ದಯಾನಂದ ಕಟೀಲು, ವೇದಿಕೆಯಲ್ಲಿ ಉಪಸ್ಥಿತರಿದರು. ಎನ್ ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಶ್ರೇಯಾ ಭಟ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ