ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ಪ್ರೌಢಶಾಲಾ ಉಸ್ತುವಾರಿ ಗೋವಿಂದರಾಯ ಶೆಣೈ ಅಡ್ಯನಡ್ಕ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರು ಧ್ವಜಗೀತೆ, ವಂದೇ ಮಾತರಂ ಮತ್ತು ರಾಷ್ಟ್ರಗೀತೆಯನ್ನು ಹಾಡಿದರು. ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಸ್ವಾಗತಿಸಿ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್.ಎಸ್. ವಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ವಸಂತ ಕೆ. ಮಾರ್ಗದರ್ಶನ ನೀಡಿದರು. ಕಾಲೇಜಿನ ವಿದ್ಯಾರ್ಥಿ ನಾಯಕ ಶ್ರೀನಿವಾಸ್ ನೇತೃತ್ವ ವಹಿಸಿದ್ದರು. ಜನತಾ ವಿದ್ಯಾಸಂಸ್ಥೆ ಹಾಗೂ ಎ.ಜೆ.ವೆಜಿಟೇಬಲ್ಸ್ ಮಾಲಕ ಜಲೀಲ್ ಅಡ್ಯನಡ್ಕ ಅವರ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು.
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜವಂದನೆ, ಬಳಿಕ ಅಡ್ಯನಡ್ಕ ಪೇಟೆಯಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ರೋವರ್ಸ್ ಮತ್ತು ರೇಂಜರ್ಸ್ ದಳಗಳು, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪೆರೇಡ್ ಹಮ್ಮಿಕೊಳ್ಳಲಾಗಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

