ಅಭಾಸಾಪ ಬೆಳ್ತಂಗಡಿ: ವಿಶ್ವ ರೂಪ ದರ್ಶನ ಯೋಗ- ವಿಶೇಷ ಉಪನ್ಯಾಸ

Upayuktha
0

 



ಬೆಳ್ತಂಗಡಿ: ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಭಾನುವಾರ (ಆ.10) ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ ಹನ್ನೊಂದನೇ ಅಧ್ಯಾಯ ವಿಶ್ವರೂಪ ದರ್ಶನ ಯೋಗದ ಉಪನ್ಯಾಸವನ್ನು ಶ್ರೀ.ಧ.ಮಂ. ಕಾಲೇಜು (ಸ್ವಾಯತ್ತ) ಉಜಿರೆಯ ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ ಭಟ್ ಇವರು ನೀಡಿದರು.

   

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜು ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇವರು ವಹಿಸಿದ್ದರು. 


ಅತಿಥಿಗಳು ಶಾರದ ಮಾತೆ ಮತ್ತು ಭಾರತ ಮಾತೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಗೈದರು.


ಶ್ರೀಮತಿ ಮಂಗಳಾ ಇವರ ಶಾರದಾ ಸ್ತುತಿ ಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಸಮಿತಿಯ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರು ರಚಿಸಿದ ಆಶಯ ಗೀತೆಯನ್ನು ಕು. ಮೈಥಿಲಿ ಇವರು ಸುಶ್ರಾವ್ಯವಾಗಿ ಹಾಡಿದರು. ರಾಮಚಂದ್ರ ಶೆಟ್ಟಿ ಇವರು ಆಗಮಿಸಿದ್ದ ಸರ್ವರನ್ನು ಸ್ವಾಗತಿಸಿದರು.

ಅಭ್ಯಾಗತರನ್ನು ತಾಂಬೂಲ ನೀಡಿ ಸ್ವಾಗತಿಸಲಾಯಿತು.


ಸಂಪನ್ಮೂಲ ವ್ಯಕ್ತಿ ಡಾ.ಶ್ರೀಧರ ಭಟ್ ಇವರು ಭಗವದ್ಗೀತೆಯ 11 ನೇ ಅಧ್ಯಾಯ ವಿಶ್ವ ರೂಪ ದರ್ಶನ ಯೋಗದ ಬಗ್ಗೆ ವಿವರಿಸುತ್ತಾ, ಶ್ರೀ ಕೃಷ್ಣನು ಅರ್ಜುನನಿಗೆ ಪ್ರದರ್ಶಿಸಿದ ಜಗತ್ತಿನ ಸೃಷ್ಟಿ ಸ್ಥಿತಿ ಮತ್ತು ಲಯಗಳನ್ನು, ಅನಂತ ಬ್ರಹ್ಮಾಂಡದ ಎಲ್ಲಾ ಜೀವಿಗಳು, ದೇವರುಗಳು ಮತ್ತು ಪ್ರಕೃತಿಯ ಅಂಶಗಳನ್ನು ಒಳಗೊಂಡಿರುವ ದೈವಿಕ ರೂಪವನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುತ್ತಾ ಇದು ಭಗವಂತನ ಮಹಿಮೆಯನ್ನು, ಶಕ್ತಿಯನ್ನು ಮತ್ತು ಮಹತ್ವವನ್ನು ಅರಿತುಕೊಳ್ಳಲು ಹೇಗೆ ಸಹಾಯಕವಾಗುತ್ತದೆ ಎಂಬುವುದನ್ನು ಅರ್ಥಮಾಡಿಸಿದರು.


ರಾಜು ಶೆಟ್ಟಿ ಇವರು ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಸಾಹಿತ್ಯಾಸಕ್ತಿಯೊಂದಿಗೆ ಕಳೆದುಕೊಂಡಿರುವ ಯುವ ಜನತೆಗೆ ಇಂತಹ ಕಾರ್ಯಕ್ರಮಗಳು ಸಂಸ್ಕಾರವನ್ನು ನೀಡುತ್ತದೆ. ಈ ನಿಟ್ಟಿನಲ್ಲಿ ಅಭಾಸಾಪ ಬೆಳ್ತಂಗಡಿ ತಾಲೂಕು ಸಮಿತಿಯ ಈ ಪ್ರಯತ್ನವು ಅನುಕರಣೀಯ ಮತ್ತು ಅಭಿನಂದನೀಯ ಎಂದರು. ಅತಿಥಿಗಳನ್ನು ಪುಸ್ತಕ ಸ್ಮರಣಿಕೆ ನೀಡಿ ಗೌರವಿಸಲಾಯಿತು. 


ಕು. ಸೋನಾಕ್ಷಿ ಇವರು ಕಾರ್ಯಕ್ರಮ ನಿರೂಪಿಸಿ, ರಾಮಕೃಷ್ಣ ಬದನಾಜೆ ಇವರು ಸರ್ವರಿಗೂ ಧನ್ಯವಾದವನ್ನಿತ್ತರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top